ಮಂಗಳೂರು ವಿಮಾನ ನಿಲ್ದಾಣದಲ್ಲಿ ಯಕ್ಷಗಾನದ ಭವ್ಯ ಪ್ರತಿಮೆ ಸ್ಥಾಪನೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ ಪ್ರದೇಶದಲ್ಲಿ 10.25 ಅಡಿ ಎತ್ತರದ ಯಕ್ಷಗಾನದ ಗ್ರಾನೈಟ್ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.

ಬಿಹಾರದ ಶಿಲ್ಪಿ ಹಿಮಾಂಶು ಕುಮಾರ್ ಅವರು ತುಳು ಸಂಸ್ಕೃತಿಗೆ ಮಾರು ಹೋಗಿ ಈ ಸುಂದರ ಕಲಾಕೃತಿಯನ್ನು ನಿರ್ಮಿಸಿದ್ದಾರೆ.ಕೇವಲ 64 ದಿನಗಳಲ್ಲಿ ಹಿಮಾಂಶು ಮತ್ತು ಅವರ ತಂಡವು ಈ ಪ್ರತಿಮೆಯ ಕೆಲಸವನ್ನು ಪೂರ್ಣಗೊಳಿಸಿದ್ದು ಇದು ನಾಲ್ಕು ಟನ್ ಭಾರವಿದೆ. ಈ ಪ್ರತಿಮೆಯನ್ನು 3 ಅಡಿ ಪೀಠದ ಮೇಲೆ ನಿಲ್ಲಿಸಲಾಗಿದೆ.ಕರಾವಳಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ನೈಜ ಸಂಭ್ರಮಾಚರಣೆಯ ಅಂಗವಾಗಿ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಈಗಾಗಲೇ ವಿಮಾನ ನಿಲ್ದಾಣದ ಆಗಮನ ಸಭಾಂಗಣದಲ್ಲಿ ದೋಣಿ ನಡೆಸುವ ಮೀನುಗಾರನ ಪ್ರತಿಮೆ, ಪ್ರಸಿದ್ಧ ಪಿಲಿ ವೇಷ, ಹಾಗೂ ಕೆಳ ಮಹಡಿಯ ಆಗಮನ ಸಭಾಂಗಣದಲ್ಲಿ ಜಾನಪದ ಕ್ರೀಡೆ ‘ಕಂಬಳ’ದ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಅದರೊಂದಿಗೆ ಈ ನೂತನ ಪ್ರತಿಮೆ ಕಣ್ಸೆಳೆಯುತ್ತಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.