ಕಬ್ಬಡಿ ಪಂದ್ಯಾಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪ. ಪೂ ಕಾಲೇಜು ಬಾಲಕಿಯರ ತಂಡ ದ್ವಿತೀಯ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ, ಮಂಗಳೂರು ಹಾಗೂ ಸರಕಾರಿ ಪ.ಪೂ ಕಾಲೇಜು ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ಸೆ.17 ರಂದು ನಡೆದ ಪುತ್ತೂರು ತಾಲೂಕು ಮಟ್ಟದ ‘ಮ್ಯಾಟ್ ಕಬ್ಬಡಿ ಪಂದ್ಯಾಟ 2025- 26 ಪಂದ್ಯಾಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕಿಯರ ವಿಭಾಗವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ದ್ವಿತೀಯ ಕಲಾ ವಿಭಾಗದ ಅಸ್ಥಿಕಾ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಸುಪ್ರಿಯಾ ಇವರು ಸುಳ್ಯ ನೆಹರು ಮೆಮೋರಿಯಲ್ ಕಾಲೇಜುನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು, ಬೆಸ್ಟ್ ರೈಡರ್ ಆಗಿ ಅಸ್ಥಿಕಾ ಹೊರಹೊಮ್ಮಿದ್ದಾರೆ.

ಉಳಿದಂತೆ ಪಂದ್ಯಾಟದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಶ್ರೇಯಾ ಶ್ರೀ, ವರ್ಷಾ ಕೆ, ಪ್ರಥಮ ವಾಣಿಜ್ಯ ವಿಭಾಗದ ಮೋಕ್ಷಾ, ಶ್ರೀನಿಧಿ ಬಿಲ್ಲವ, ಪಯಸ್ವಿನಿ ಎ. ಪಿ, ಪ್ರಥಮ ವಿಜ್ಞಾನ ವಿಭಾಗದ ಹಶಿತಾ ಎನ್. ಆರ್, ಪ್ರತೀಕ್ಷಾ ಡಿ. ಯು, ಏಂಜೆಲ್. ಜೆ ಹಾಗೂ ಅಮಿಶಾ ಮೋಹನ್ ಭಾಗವಹಿಸಿದ್ದರು. ಇವರಿಗೆ ಮಹಮದ್ ಅಬೀಬ್ ತರಬೇತಿ ನೀಡಿರುತ್ತಾರೆ.

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.