ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.)ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.)ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಹಯೋಗದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಮಾತೆಯರಿಂದ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟನೆಗೊಂಡಿತು………….

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಶ್ರೀನಿವಾಸ ಕಲ್ಯಾಣೋತ್ಸವದ ಎರಡು ದಿವಸಗಳ ಕಾರ್ಯಕ್ರಮದ ಸಂಪೂರ್ಣ ವಿವರಣೆ ನೀಡಿ,ಆರ್ಲಪದವು ಜನತೆಯ ಸಂಪೂರ್ಣ ಸಹಕಾರ ಕೋರಿದರು.

ಹೊರೆಕಾಣಿಕೆ ಸಂಚಾಲಕರಾದ ಅನಿಲ್ ಕಣ್ಣರ್ನೋಜಿ ಮಾತನಾಡಿ ಈ ಎರಡು ದಿವಸಗಳ ಕಾರ್ಯಕ್ರಮಕ್ಕೆ ಪ್ರತಿ ಮನೆಯಿಂದ ಹೊರೆಕಾಣಿಕೆಯನ್ನು ಸೇವೆಯ ಮೂಲಕ ನೀಡಿ ಶ್ರೀನಿವಾಸ ದೇವರ ಕೃಪೆಗೆ ಪಾತ್ರರಾಗಬೇಕಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಪ್ರೇಮರಾಜ್ ಆರ್ಲಪದವು, ಕೋಶಾಧಿಕಾರಿ ರೂಪೇಶ್ ನಾಯ್ಕ್ , ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ,ಹೊರೆಕಾಣಿಕೆ ಸಹ ಸಂಚಾಲಕರಾದ ಧನಂಜಯ ಕಲ್ಲಮ, ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರ್,ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪದಾಧಿಕಾರಿಗಳು ಮತ್ತು ಪಕ್ಷದ ಪದಾಧಿಕಾರಿಗಳು, ಮಾತೆಯರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.