
ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲ ಹಾಗೂ ಮೋದಿ ಅಭಿಮಾನಿ ಬಳಗ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಹುಟ್ಟು ಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಡ ರೋಗಿಗಳಿಗೆ ಹಾಗೂ ಬಿರುಮಲೆ ಬೆಟ್ಟದ ಪ್ರಜ್ಞಾ ವಿಶೇಷ ಚೇತನರ ಕೇಂದ್ರಕ್ಕೆ ಹಣ್ಣು ಹಂಪಲು ವಿತರಿಸಿದರು.
ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್ ಮಾತನಾಡಿ, ಭಾರತ ವಿಶ್ವಗುರುವಾಗುವಲ್ಲಿ ಪ್ರಧಾನಿ ಮೋದಿಯವರ ಪಾತ್ರ ಪ್ರಮುಖವಾಗಿದೆ. ಅವರ ಆರೋಗ್ಯ, ಆಯಷ್ಯ ವೃದ್ಧಿಯಾಗಲಿ ಎಂದು ನಗರ ಮಂಡಲದ ನೇತೃತ್ವದಲ್ಲಿ ಎಲ್ಲರ ಸಹಕಾರದೊಂದಿಗೆ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಸರಕಾರಿ ಆಸ್ಪತ್ರೆಯ ಬಡರೋಗಿಗಳಿಗೆ ಹಣ್ಣ ಹಂಪಲು ವಿತರಿಸಲಾಗುತ್ತಿದೆ ಎಂದರು.
ನಗರ ಮಂಡಲದ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ ಮಾತನಾಡಿ, ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಸೆ.೧೭ರಿಂದ ಅ.೨ರ ತನಕ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ವಿವಿಧ ಸೇವಾ ಕಾರ್ಯಗಳು ನಡೆಯಲಿದೆ. ಇದರಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣ ಹಂಪಲು ವಿತರಿಸಲಾಗುತ್ತಿದೆ. ಮುಂದೆ ಸ್ವಚ್ಚತೆ, ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುವುದು.
ಸುಮಾರು ೨೫೦ಮಂದಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿ ವಿರೂಪಾಕ್ಷ ಭಟ್, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ನಗರ ಮಂಡಲದ ಉಪಾಧ್ಯಕ್ಷ ಸಂತೋಷ್ ರೈ ಕೈಕಾರ, ಎಸ್‌ಡಿ ಮೋರ್ಚಾದ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ಮಹಿಳಾ ಮೋರ್ಚಾ ಜಯಲಕ್ಷ್ಮೀ ಶಗ್ರಿತ್ತಾಯ, ಸೀತಾರಾಮ ರೈ ಕೆದಂಬಾಡಿಗುತ್ತು, ನಗರ ಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಸದಸ್ಯರಾದ ವಿದ್ಯಾ ಗೌರಿ, ಗೌರಿ ಬನ್ನೂರು, ಮನೋಹರ್ ಕಲ್ಲಾರೆ, ದೀಕ್ಷಾ ಪೈ, ಪುರಸಭಾ ಮಾಜಿ ಅಧ್ಯಕ್ಷರಾದ ರಾಜೇಶ್ ಬನ್ನೂರು, ಯು.ಲೋಕೇಶ್ ಹೆಗ್ಡೆ, ಶಶಿಧರ್ ನಾಯಕ್, ನಾಗೇಂದ್ರ ಬಾಳಿಗ, ನಿರಂಜನ್, ಚಂದ್ರಶೇಖರ ಬಪ್ಪಳಿಗೆ, ಮುರಳಿಕೃಷ್ಣ ಹಸಂತಡ್ಕ,ನಗರ ಸಭಾ ಮಾಜಿ ಸದಸ್ಯ ವಿನಯ ಭಂಡಾರಿ, ಸ್ವರ್ಣಲತಾ ಹೆಗ್ಡೆ, ಸತೀಶ್ ನಾಕ್, ಪುರುಷೋತ್ತಮ ನಾಯ್ಕ್ ಪಾಂಗಳಾಯಿ ಸೇರಿದಂತೆ ಹಲವು ಮಂದಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


