ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕಾರ್ಯಗಳ ಬಗ್ಗೆ ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರ ಜೊತೆ ಶಾಸಕ ಅಶೋಕ್ ರೈ ಅವರು ಶುಕ್ರವಾರ ಮಾತುಕತೆ ನಡೆಸಿದರು.
ಪುತ್ತೂರು ದೇವಳದ ಅಭಿವೃದ್ದಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ಸಿದ್ದಗೊಂಡಿದ್ದು ,ಅಭಿವೃದ್ದಿ ಕಾರ್ಯಗಳಿಗೆ ಸಂಬಂದಿಸಿದ ಅನುದಾನ ಹಾಗೂ ಮುಜರಾಯಿ ಇಲಾಖೆಯಿಂದ ನೆರವಿನ ಬಗ್ಗೆ ಸಚಿವರ ಜೊತೆ ಚರ್ಚೆ ನಡೆಸಿದರು.
ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನವು ಸುಮಾರು‌ 352 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ದಿಯಾಗಲಿದ್ದು ಇದರ ಮಾಸ್ಟರ್ ಪ್ಲಾನ್ ಸಿದ್ದಗೊಂಡಿರುವ ಬಗ್ಗೆ ಸಚವರಿಗೆ ಮಾಹಿತಿ ನೀಡಲಾಯಿತು. ದೇವಸ್ಥಾನಕ್ಕೆ ಜಾಗ ಖರೀದಿ ಮಾಡಬೇಕಿದ್ದು ಇದಕ್ಕೆ ಇಲಾಖೆಯ ಅನುಮತಿ ಬಗ್ಗೆಯೂ ಸಚಿವರ‌ಗಮನಕ್ಕೆ ತರಲಾಯಿತು. ಎರಡೂ ದೇವಸ್ಥಾನಗಳ ಅಭಿವೃದ್ದಿ ಕಾರ್ಯಗಳು ನಡೆಯುವ ಬಗ್ಗೆ ಸಚಿವರಿಗೆ ವಿವರಣೆಯನ್ನು ನೀಡಲಾಯಿತು. ಈ ವೇಳೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ವಿನಯಾ, ಸುಬಾಸ್, ಜಿಲ್ಲಾ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಮುರಳೀದರ್ ರೈ ಮಟಂತಬೆಟ್ಟು ಇದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.