ಪಶು ಸಂಗೋಪನಾ ಇಲಾಖೆಯಿಂದ ನಾಟಿ ಕೋಳಿಮರಿಗಳನ್ನು ವಿತರಣೆ

ಪುತ್ತೂರು: ಇಷ್ಟು ವರ್ಷ ಪಶು ಸಂಗೋಪನಾ ಇಲಾಖೆಯಿಂದ ಗಿರಿರಾಜ ಕೋಳಿ ಮರಿಗಳನ್ನು ನೀಡಲಾಗುತ್ತಿತ್ತು, ಆದರೆ ಈ ಬಾರಿ ಜಿಲ್ಲೆಯ ಜನರ ಬೇಡಿಕೆಯಂತೆ ನಾಟಿ ಕೋಳಿಮರಿಗಳನ್ನು ವಿತರಣೆ ಮಾಡುತ್ತಿದ್ದೇವೆ. ಮಹಿಳೆಯರ ಸ್ವ-ಉದ್ಯೋಗಕ್ಕೂ ಇದು ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪಶು ಸಂಗೋಪನಾ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅರ್ಹ 46 ಮಹಿಳೆಯರಿಗೆ 5 ವಾರದ ಕೋಳಿ ಮರಿಗಳನ್ನು ವಿತರಿಸಲಾಗಿದೆ.

ಪ.ಪಂಗಡದ 40, ಸಾಮಾನ್ಯ 4 ಹಾಗೂ ಪ.ಜಾತಿ 2 ಕುಟುಂಬದ ಒಟ್ಟು 46 ಮಂದಿಗೆ ಮರಿಗಳನ್ನು ವಿತರಣೆ ಮಾಡಲಾಯಿತು.

ನಾಟಿ ಕೋಳಿಗೆ ಉತ್ತಮ ಬೇಡಿಕೆ ಇದ್ದು ಮಹಿಳೆಯರು ಮನೆಯಲ್ಲಿ ನಾಟಿ ಕೋಳಿಗಳನ್ನು ಸಾಕುವ ಮೂಲಕ ಸ್ವ-ಉದ್ಯೋಗವನ್ನು ಮಾಡಿ ಉತ್ತಮ ಲಾಭವನ್ನು ಗಳಿಸಬಹುದು ಎಂದು ಹೇಳಿದ ಶಾಸಕರು ಸರಕಾರ ಉಚಿತ ಗ್ಯಾರಂಟಿ ಯೋಜನೆಯ ಜೊತೆಗೆ ಇನ್ನಿತರ ಉಚಿತ ಸ್ವಾವಲಂಬಿ ಯೋಜನೆಗಳನ್ನು ಜಾರಿಗೆ ತಂದು ಬಡವರ ಅಭಿವೃದ್ದಿಗೆ ಶ್ರಮಿಸುತ್ತಿದೆ ಎಂದು ಶಾಸಕರು ಹೇಳಿದರು.

ತಾಲೂಕು ಪಶು ವೈದ್ಯಾಧಿಕಾರಿ ಡಾ.ಧರ್ಮಪಾಲ ಅವರು ಸ್ವಾಗತಿಸಿ, ಸರಕಾರದಿಂದ ಸಿಗುವ ಇತರೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಡಾಕ್ಟರ್ ಪ್ರಕಾಶ್, ಮತ್ತು ಸಿಬ್ಬಂದಿಗಳು ಇದೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!