ಅ.17ರಂದು ಟೈಮ್ ಪಾಸ್‌’ ಕನ್ನಡ ಚಲನಚಿತ್ರ ರಾಜ್ಯದಾದ್ಯಂತ ತೆರೆಗೆ.

ಪುತ್ತೂರು: ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಚಲನ ಚಿತ್ರ ‘ಟೈಮ್ ಪಾಸ್’ ಅ.17ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ನಿರ್ದೇಶಕ ಚೇತನ್ ಜೋಡಿದಾರ್ ಹೇಳಿದರು.

ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.17ರಂದು ಟ್ರೈಲರ್ ಬಿಡುಗಡೆಯಾಗಲಿದೆ. ಟ್ರೇಸ‌ರ್ ಮತ್ತು ಹಾಡು ಈಗಾಗಲೇ ಬಿಡುಗಡೆಯಾಗಿದ್ದು ಪ್ರೇಕ್ಷರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಧುನಿಕ ಎಐ ತಂತ್ರಜ್ಞಾನ ಬಳಸಿಕೊಂಡು ಈ ಚಿತ್ರದ ನಿರ್ಮಾಣವಾಗಿದೆ. ನುರಿತ ತಂತ್ರಜ್ಞರನ್ನು ಬಳಸಿಕೊಂಡು ಗುಣಮಟ್ಟದ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರವು ಹಾಸ್ಯ ಭರಿತವಾಗಿದ್ದು ಕುಟುಂಬದವರೆಲ್ಲರೂ ಸೇರಿಕೊಂಡು ವೀಕ್ಷಣೆ ಮಾಡಬಹುದಾದ ಚಿತ್ರವಾಗಿದೆ. ಎರಡೂವರೆ ತಾಸುಗಳ ಈ ಚಿತ್ರವು ವೀಕ್ಷಕರಿಗೆ ಸಂಪೂರ್ಣ ಟೈಮ್‌ಪಾಸ್ ಆಗಲಿದೆ. ನೈಜ ಜೀವನದ ನಡೆದ ಕಥೆಗಳನ್ನು ಆಧರಿಸಿ ನಿರ್ಮಾಣಗೊಂಡಿದೆ. ಸಿನಿಮಾ ಇಂಡಸ್ಟ್ರೀಯಲ್ಲಿ ನಿರ್ದೇಶಕರು, ತಂತ್ರಜ್ಞರು ಯಾವ ರೀತಿ ಕಷ್ಟ ಪಡುತ್ತಿದ್ದಾರೆ ಎಂದು ಚಿತ್ರದಲ್ಲಿ ನೀಡಲಾಗಿದೆ. ಹೊಟ್ಟೆ ಹುನ್ನಾಗಿಸುವ ನಗುವ ಹಾಸ್ಯಗಳಿಂದ ಕೂಡಿದೆ. ಈ ಚಿತ್ರವು ಬೆಂಗಳೂರಿನಲ್ಲಿ ಚಿತ್ರೀಕರಣಗೊಂಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಿನಿಮಾ ವಿತರಕರಾಗಿರುವ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ ಅವರನ್ನು ಚಿತ್ರತಂಡದವರು ಸನ್ಮಾನಿಸಿದರು. ಸಹ ನಿರ್ದೇಶಕಿ ವೈಷ್ಣವಿ ಸತ್ಯನಾರಾಯಣ್, ರಕ್ಷಾರಾಮ್, ಹಾಸ್ಯ ಕಲಾವಿದ ಓಂ ಶ್ರೀ ಯಕ್ಷಶಿಫ್, ಚಿತ್ರ ತಂಡದ ಜಿಲ್ಲಾ ಮಾಧ್ಯಮ ಸಲಹೆಗಾರ ಸೂರಜ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!