ಆಕಸ್ಮಿಕವಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಹಾನಿ

ಬೆಳ್ತಂಗಡಿ: ನೆರಿಯದಲ್ಲಿ ಕಡ್ಡಿ ಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅ.6ರಂದು ಆಕಸ್ಮಿಕವಾಗಿ ರಾತ್ರಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಮನೆ ಹಾನಿಯಾಗಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ.

ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಮುಂಬೈ ಹೋಗಿದ್ದು ಅಲ್ಲಿ ಕಾರ್ಯಕ್ರಮ ಮುಗಿಸಿ ಮನೆಗೆ ಬಂದಿದ್ದರು. ಪತ್ನಿ ಹಾಗೂ ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಹಾಗೂ ತಾಯಿ ಪಕ್ಕದ ಮನೆಯಲ್ಲಿ ಇದ್ದರು.

ಸಂಜೆ ವೇಳೆ ಮಕ್ಕಳು ಮನೆಗೆ ತೆರಳಿ ವಾಪಸ್ ಬಂದಿದ್ದರು.
ಬಳಿಕ ಬೆಂಕಿ ಅನಾಹುತ ಉಂಟಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮನೆಗೆ ಬೆಂಕಿ ಹೇಗೆ ತಗುಲಿದೆ ಎಂಬುದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಹಂಚಿನ ಮೇಲ್ಛಾವಣಿಯ ಮನೆ ಬಹುತೇಕ ಬೆಂಕಿಗೆ ಆಹುತಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗ್ರಾಮ ಪಂಚಾಯತ್ ನ ನೀರಿನ ಮೂಲಕ ಬೆಂಕಿ ನಂದಿಸಲಾಯಿತು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!