4 ತಿಂಗಳ ಹಿಂದೆ ನಡೆದ ರಸ್ತೆ ಅಪಘಾತ: ಕೋಮಾದಲ್ಲಿದ್ದ ಅಪೂರ್ವ ಭಟ್ ಇನ್ನು ನೆನಪು ಮಾತ್ರ

ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ನಾಲ್ಕು ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು 134 ದಿನಗಳಿಂದ ಕೋಮಾದಲ್ಲಿದ್ದು ಸಾವು -ಬದುಕಿನ‌ ನಡುವೆ ಹೋರಾಟ ನಡೆಸುತ್ತಿದ್ದ ಅಪೂರ್ವ ಭಟ್‌ (30) ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಅಂಡೆಪುಣಿ ಈಶ್ವರ ಭಟ್ ಮತ್ತು ಪುತ್ರಿ ಅಪೂರ್ವ ಭಟ್‌(30) ಅವರು ಗಂಭೀರ ಗಾಯಗೊಂಡಿದ್ದರು. ಈಶ್ವರ ಭಟ್ ಅವರ ಮೊಮ್ಮಗಳು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದರು. ಗಂಭೀರ ಗಾಯಗೊಂಡಿದ್ದ ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ನಡುವೆ ಈಶ್ವರ ಭಟ್ ಅವರು ಚೇತರಿಸಿಕೊಂಡಿದ್ದರು. ಅಪೂರ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಅಪೂರ್ವ ಅವರ ಪತಿ ಆಶಿಶ್ ಸಾರಡ್ಕ ಅವರು, ಪತ್ನಿ ಚೇತರಿಸಿಕೊಳ್ಳಲಿ ಎಂದು ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಪ್ರಾರ್ಥಿಸಿದ್ದರು. “ತಾಯಿ ಪ್ರೀತಿಗೋಸ್ಕರ ಹಂಬಲಿಸುತ್ತಿರುವ ಮಗಳಿಗಾಗಿ ಪ್ರಾರ್ಥಿಸಿ” ಎಂದು ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿದ್ದರು. ಸಾವಿರಾರು ಜನರು ಅವರ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಪತ್ನಿಯ ಚಿಕಿತ್ಸೆಗಾಗಿ ಬೆಂಗಳೂರಿನಿಂದ ಮಂಗಳೂರಿಗೆ ಮನೆ ಶಿಫ್ಟ್ ಮಾಡಿದ್ದರು. ಆದರೆ ಅಪೂರ್ವ ಭಟ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತಿ, ಪುತ್ರಿಯನ್ನು ಅಗಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!