ಪುತ್ತೂರು ತಾಲೂಕಿನ ಬೆಟ್ಟOಪ್ಪಾಡಿ ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟOಪ್ಪಾಡಿ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಇವರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA), ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM), ಜಲಜೀವನ್ ಮಿಷನ್ (JJM) ಮತ್ತು ರಾಜ್ಯ ಸರಕಾರದ ಯೋಜನೆಯಾದ ಬಸವ ವಸತಿ ಮತ್ತು ಡಾ. ಬಿ ಆರ್ ಅಂಬೇಡ್ಕರ್ ನಿವಾಸ್ ಯೋಜನೆಯ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಲಾಯಿತು. ಮತ್ತು ವಿನ್ಯಾಸ ಅನುಮೋದನೆ, ನಮೂನೆ 9 & 11ಎ,11-B,ಸ್ವಾಧೀನ ಪ್ರಮಾಣ ಪತ್ರ, ಕಟ್ಟಡ ತೆರಿಗೆ ಸಂಗ್ರಹಣೆ,ವಾರ್ಡ್ ಮತ್ತು ಗ್ರಾಮ ಸಭೆ,ಗ್ರಾಮ ಪಂಚಾಯತ್ ಅಭಿವೃದ್ಧಿಯಲ್ಲಿ ಇರುವ ಅಡಚಣೆ ಮತ್ತು ಬೆಟ್ಟOಪ್ಪಾಡಿ ಗ್ರಾಮ ಪಂಚಾಯತ್ ಕೈ ಗೊಂಡಿರುವ ಉತ್ತಮ ಆಡಳಿತದ ಬಗ್ಗೆ ಮಾಹಿತಿ ಪಡೆದು ಕೊಳ್ಳಲಾಯಿತು.

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ & ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆಯ ಅನುಷ್ಠಾನದ ಬಗ್ಗೆ ಮಾಹಿತಿ ಪಡೆಯಲಾಯಿತು.

ಬೆಟ್ಟOಪ್ಪಾಡಿ ಗ್ರಾಮ ಪಂಚಾಯತಿಯು ಕೇಂದ್ರ ಸರ್ಕಾರದ MGNREGA, ಮತ್ತು 15 ನೇ ಹಣಕಾಸು ಅನುದಾನ ಮತ್ತು ವಸತಿ ಯೋಜನೆಯ ಅನುಷ್ಠಾನದಲ್ಲಿ ಸಾಧಿಸಿರುವ ಉತ್ತಮ ಪ್ರಗತಿ ಮತ್ತು ಸಾರ್ವಜನಿಕರ ಸೇವೆಗೆ ಪಾರದರ್ಶಕ ಮತ್ತು ಉತ್ಸಾಹದ ಕಾರ್ಯವೈಖರಿ ಬಗ್ಗೆ ತಿಳಿದು ಪ್ರಶಂಶಿಸಲಾಯಿತು.

ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ತಮ್ಮ ಸೇವಾ ಅವಧಿಯಲ್ಲಿನ ಅನುಭವವನ್ನು ಹಂಚಿಕೊಂಡರು. ಗ್ರಾಮೀಣ ಭಾಗದ ಸಾರ್ವಜನಿಕರು ತಮ್ಮ ನಿವೇಶನದ ವಿನ್ಯಾಸ ಅನುಮೋದನೆಗೆ ನಗರ ಯೋಜನಾ ಪ್ರಾಧಿಕಾರಕ್ಕೆ ಅಲೆದಾಟ ನಡೆಸುತ್ತಿರುವ ಮತ್ತು ಸದರಿ ಪ್ರಾಧಿಕಾರದಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ಸಾರ್ವಜನಿಕರು ಅನುಭವಿಸುತ್ತಿರುವ ಕಷ್ಟದ ಬಗ್ಗೆ ತಿಳಿಸಿದರು. ಸದರಿ ವಿನ್ಯಾಸ ಅನುಮೋದನೆ ಅಧಿಕಾರವನ್ನು ಗ್ರಾಮ ಪಂಚಾಯತಿಗೆ ನೀಡಲು ಪ್ರಯತ್ನಿಸುವಂತೆ ವಿನಂತಿಸಿ ಕೊಂಡರು.

ಗ್ರಾಮ ಪಂಚಾಯತಿಯ ಹೆಚ್ಚಿನ ಮನೆಗಳಿಂದ ಒಣ ಕಸ ಸಂಗ್ರಹಣೆ ಮಾಡಿ ಸೂಕ್ತ ವಿಧಾನದ ಮೂಲಕ ವಿಲೇವಾರಿ ಮಾಡುತ್ತಿರುವುದನ್ನು ತಿಳಿದು ಪ್ರಶಂಸಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಪದಾ ಧಿಕಾರಿಗಳು ,ಗ್ರಾಮದ ಹಿರಿಯ ನಾಗರಿಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!