ಆನೆ ದಾಳಿಗೆ ಬಲಿಯಾದ ವಯನಾಡ್ ವ್ಯಕ್ತಿಗೆ ರಾಜ್ಯಸರಕಾರದಿಂದ ಪರಿಹಾರ ನೀಡಲು ರಾಹುಲ್ ಗಾಂಧಿ ಸಲಹೆ,ಸರ್ಕಾರದ ವಿರುದ್ಧ ಬಿಜೆಪಿ ಕಿಡಿ.

ಬೆಂಗಳೂರು : ರಾಜ್ಯದಲ್ಲಿ ರೈತರು ಜನಸಾಮನ್ಯರು ಸಂಕಷ್ಟದಲ್ಲಿರುವಾಗ ಕೇರಳದ ವಯನಾಡು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಮೃತಪಟ್ಟ ವ್ಯಕ್ತಿಗೆ 15 ಲಕ್ಷ ಪರಿಹಾರ ನೀಡಲು ಸಿದ್ದರಾಮಯ್ಯ ಸರಕಾರ ತಯಾರಾಗಿದ್ದು ಮೃತನ ಕುಟುಂಬಕ್ಕೆ ನೆರವಾಗುವಂತೆ ‘ಕೈ’ ನಾಯಕ ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ವಿಚಾರವಾಗಿ ಸೋಮವಾರವೇ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿದ್ದಾರೆ. 15 ಲಕ್ಷ ರೂಪಾಯಿ ಪರಿಹಾರ ನೀಡುವ ಕಾಂಗ್ರೆಸ್ ಸರ್ಕಾರದ ತೀರ್ಮಾನ ಖಂಡನೀಯ ಎಂದು ಅವರು ಹೇಳಿದ್ದು, ನಮ್ಮ ತೆರಿಗೆ ನಮ್ಮ ಹಕ್ಕು ಅಂತ ಬೊಗಳೆಬಿಡುವ ಸಿದ್ದರಾಮಯ್ಯ ನವರಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಅಕ್ರಮವಾಗಿ ಹಣ ಮಂಜೂರು ಮಾಡಿದ್ದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ,ಕರ್ನಾಟಕದಲ್ಲಿ ಬರಗಾಲದಿಂದ ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ.ಕಾಂಗ್ರೆಸ್ ಹೈಕಮಾಂಡ್‌ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸುತ್ತಿರುವುದಕ್ಕೆ ಸಿಎಂ ಹಾಗೂ ಸಚಿವರು ಹೊಣೆ ಹೊರಬೇಕು ಎಂದು ಅವರು ಆಗ್ರಹಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *