
ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸುರತ್ಕಲ್ ನಲ್ಲಿನ NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ವಿದ್ಯಾರ್ಥಿ ಹಾಸ್ಟೆಲ್ ಅನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು.
NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಅತ್ಯಧುನಿಕ ವಿದ್ಯಾರ್ಥಿ ಹಾಸ್ಟೆಲ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಅನಾವರಣಗೊಳಿಸಿದರು. ಬಳಿಕ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.





