ಅ. 27ರಂದು ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ

ಮಂಗಳೂರು, ಅ.25: ಸಿಎಂ ಸಿದ್ದರಾಮಯ್ಯ ಅವರು ಅ.27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. ಸಂಜೆ 4:25ಕ್ಕೆ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ‘ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ – 2025’ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾತ್ರಿ 7:25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಉಸ್ತುವಾರಿ ಸಚಿವರ ಪ್ರವಾಸದ ವಿವರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅ.27ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 9:55 – ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. 10:30 – ಕುಂಜತ್ತಬೈಲ್ ಮೂಡ ಲೇಔಟ್ ಸ್ಥಳ ಪರಿಶೀಲನೆ, 11:45ಕ್ಕೆ ಉರ್ವಾ ಮಾರುಕಟ್ಟೆ ಕಟ್ಟಡ ಕಾಮಗಾರಿ ಪರಿಶೀಲನೆ, ಮಧ್ಯಾಹ್ನ 12:45ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ, 3:30ಕ್ಕೆ ಮುಖ್ಯಮಂತ್ರಿಗಳೊ0ದಿಗೆ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ 2025-ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!