
ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪು ಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
2019ರಲ್ಲಿ ದುಬೈಗೆ ತೆರಳಿ ಎಕ್ಸ್ ಕ್ಯೂ ಜೆಟ್ ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಪ್ರತೀ ದಿನ ಕಂಪನಿಯ ಕ್ಯಾಬ್ ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆಬ್ರವರಿ 22ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.


