ಅಂಬುಲೆನ್ಸ್‌ಗೆ ದಾರಿ ನೀಡದೆ ಹುಚ್ಚಾಟ ಮೆರೆದ ದ್ವಿಚಕ್ರ ವಾಹನ ಸವಾರ ಬಂಧನ..!

ಮಂಗಳೂರು : ಇಂದು ಬಿಸಿಲೆ ಘಾಟ್ ನಲ್ಲಿ ನಡೆದ ಬಸ್ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮುಂದೆ ಚಳಿಸದಂತೆ ಹುಚ್ಚಾಟ ನಡೆಸಿದ ಆರೋಪಿಯ ಬಂಧನವಾಗಿದೆ.

ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ನಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.EK.0696 ನೇ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ವ್ಯಕ್ತಿಯಾದ ಮಹಮ್ಮದ್ ಮನ್ಸೂರು ಪ್ರಾಯ 38 ವರ್ಷ ಬೆಟ್ಟಂಪಾಡಿ ಗ್ರಾಮ ಪುತ್ತೂರು ತಾಲೂಕು ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!