ಪೊಲೀಸರು ಲಂಚ ಸ್ವೀಕರಿಸುವುದು ಸಾಬೀತರಾದರೆ ಸೇವೆಯಿಂದ ವಜಾ-ಜಿ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಪೊಲೀಸರು ಲಂಚ ಸ್ವೀಕರಿಸುವುದು ಸಾಬೀತಾದರೇ ಸೇವೆಯಿಂದ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಕೆ. ಶಿವಕುಮಾರ್ ಎಂಬುವರು ತಮ್ಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಲಂಚ ವಸೂಲಿ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಂದೂರು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮತ್ತು ಕಾನ್ಸ್‌ಟೇಬಲ್‌ ಅವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜಿ.ಪರಮೇಶ್ವರ್ ಅವರು, ಪೊಲೀಸ್ ಇಲಾಖೆಯ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದುಭ್ರಷ್ಟಚಾರವನ್ನು ತಮ ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.

ಪೊಲೀಸ್‌ ಇಲಾಖೆಯಲ್ಲಿ ಲಂಚ ಪಡೆದಿದ್ದರೆ ಅದು ಸಾವಿರ ಇರಲಿ, ಐದುನೂರು ರೂಪಾಯಿಯೇ ಇರಲಿ ತಕ್ಷಣವೇ ಅಮಾನತಿನಂತಹ ಕ್ರಮ ಕೈಗೊಂಡು ಇಲಾಖೆಯ ವಿಚಾರಣೆ ನಡೆಸಲಾಗುವುದು. ತನಿಖೆಯಲ್ಲಿ ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುತ್ತದೆ ಖಡಕ್ ಸಂದೇಶ ರವಾನಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *