ತಂದೆ-ಮಗಳು ಆತ್ಮಹತ್ಯೆಗೆ ಯತ್ನ – ಪೊಲೀಸರ ಸಮಯೋಚಿತ ಕಾರ್ಯದಿಂದ ಜೀವ ರಕ್ಷಣೆ

ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ತಂದೆ ತನ್ನ ಪುಟ್ಟ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಅಂಬಿಕನಗರದ ನಿವಾಸಿ ರಾಜೇಶ್ ಎಂಬವರು ತನ್ನ ನಾಲ್ಕು ವರ್ಷದ ಮಗಳೊಂದಿಗೆ ಪಣಂಬೂರು ಬೀಚ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಘಟನೆಯ ನಂತರ ರಾಜೇಶ್ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ, ಠಾಣೆಯ ಗುಪ್ತ ವಾರ್ತೆ ಹಾಗೂ ಕ್ರೈಂ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬಾಗಿಲು ಮುರಿದು ತಂದೆ-ಮಗಳನ್ನು ರಕ್ಷಿಸಿದ್ದಾರೆ. ನಂತರ ಇವರನ್ನು ಕಾವೂರು ಠಾಣೆಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಆತ್ಮಹತ್ಯೆಗೆ ಯತ್ನಿಸುವ ವೇಳೆ ಮಗಳು “ಆತ್ಮಹತ್ಯೆ ಮಾಡ್ಬೇಡ ಅಪ್ಪ” ಎಂದು ಹೇಳಿದ ಮಾತು ಎಲ್ಲರ ಮನಸ್ಸು ಕಲುಕುವಂತಾಗಿದೆ.

ಸಮಯಕ್ಕೆ ಸರಿಯಾಗಿ ಮಧ್ಯಪ್ರವೇಶಿಸಿದ ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಇಬ್ಬರ ಜೀವ ಉಳಿದಿದ್ದು, ಈ ಸಾಹಸಕ್ಕೆ ನಗರದಲ್ಲಿ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!