ಉಪಿನಂಗಡಿಯಲ್ಲಿ ಹೋಟೆಲ್ ಕಾರ್ಮಿಕನ ದುರ್ಘಟನೆ — ಕಾರಿಡಾರ್‌ನಿಂದ ಬಿದ್ದು ಸ್ಥಳದಲ್ಲೇ ಸಾವು

ಪುತ್ತೂರು: ಉಪಿನಂಗಡಿಯಲ್ಲಿ ನವೆಂಬರ್ 4ರ ಮುಂಜಾನೆ ಸಂಭವಿಸಿದ ದುರ್ಘಟನೆಯಲ್ಲಿ ಹೋಟೆಲ್ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಮೊದಲ ಮಹಡಿಯ ಕಾರಿಡಾರ್‌ನಿಂದ ಕೆಳಗಿನ ಕಾಲುವೆಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಮೃತರನ್ನು ಬೆಳ್ತಂಗಡಿ ತಾಲೂಕು ಉರ್ವಲ್ ಗ್ರಾಮದ ಬಣಾರಿ ಮನೆಯಲ್ಲಿ ವಾಸವಾಗಿದ್ದ ಗಣೇಶ್ ನಾಯಕ್ (60) ಎಂದು ಗುರುತಿಸಲಾಗಿದೆ.ಲಭ್ಯವಾದ ಮಾಹಿತಿಯ ಪ್ರಕಾರ, ಗಣೇಶ್ ನಾಯಕ್ ಉಪಿನಂಗಡಿಯಲ್ಲಿರುವ ಒಂದು ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಅವರು ಹೋಟೆಲ್‌ನ ಮೊದಲ ಮಹಡಿಯ ಕಾರಿಡಾರ್‌ಗೆ ಬಂದಾಗ ಪಾದ ಜಾರಿ ಕೆಳಗಿನ ಕಾಲುವೆಗೆ ಬಿದ್ದಿದ್ದಾರೆ. ಇದರಿಂದ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತರಾಗಿದ್ದಾರೆ.ಘಟನೆಯ ನಂತರ ಮೃತರ ಪುತ್ರ ಜಗದೀಶ್ ಉಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!