ದೆಹಲಿ ಬಾಂಬ್ ಬ್ಲಾಸ್ಟ್‌ಗೆ ಫರೀದಾಬಾದ್ ಲಿಂಕ್ – ಜೈಶ್ ಮಹಿಳಾ ವಿಂಗ್‌ನ ನಾಯಕಿ, ವೈದ್ಯೆ ಶಾಹಿನಾ ಅರೆಸ್ಟ್

ದೆಹಲಿಯ ರೆಡ್ ಪೋರ್ಟ್ ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಲಕ್ನೋ ಮೂಲದ ಮಹಿಳಾ ವೈದ್ಯೆಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಇಎಂ) ಗೆ ಮಹಿಳಾ ವಿಭಾಗವನ್ನು ಸ್ಥಾಪಿಸುವ ಮತ್ತು ನೇಮಕಾತಿ ಮಾಡುವ ಜವಾಬ್ದಾರಿ ನೀಡಲಾಗಿತ್ತು ಎಂಬ ಸ್ಫೋಟಕ ಅಂಶ ಬಯಲಾಗಿದೆ

ಸೋಮವಾರ (ನ.10) ಜಮ್ಮು ಕಾಶ್ಮೀರ ಮತ್ತು ಫರೀದಾಬಾದ್ ಪೊಲೀಸರು ಜಂಟಿ ಕಾರ್ಯಾಚರಣೆ ವೇಳೆ 2,900 ಕೆ.ಜಿ ಸ್ಫೋಟಕಗಳನ್ನು ಪತ್ತೆ ಹಚ್ಚಿ, ಎಂಟು ಜನರನ್ನು ಬಂಧಿಸಿದ್ದರು. ಅದರ ಬೆನ್ನಲ್ಲೇ ಇದೀಗ ಅಲ್-ಫಲಾಹ್ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ವೈದ್ಯೆ ಶಾಹಿನಾ ಕಾರಿನಲ್ಲಿ ರೈಫಲ್, ಮದ್ದುಗುಂಡುಗಳು ಪತ್ತೆಯಾಗಿವೆ.

ಈ ಬಗ್ಗೆ ಎನ್ ಡಿಟಿವಿ ವರದಿ ಮಾಡಿದ್ದು, ದೆಹಲಿ ಬಳಿಯ ಫರಿದಾಬಾದ್‌ನಲ್ಲಿ ನಡೆದ ಬೃಹತ್ ಸ್ಫೋಟಕಗಳ ಸಾಗಣೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಲಕ್ನೋ ಮೂಲದ ಮಹಿಳಾ ವೈದ್ಯೆ ಡಾ. ಶಾಹೀನ್ ಶಾಹಿದ್ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಇಎಂ) ಗೆ ಮಹಿಳಾ ವಿಭಾಗವನ್ನು ಸ್ಥಾಪಿಸುವ ಮತ್ತು ನೇಮಕಾತಿ ಮಾಡುವ ಜವಾಬ್ದಾರಿಯನ್ನು ಹೊಂದಿದ್ದರು ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ

ಪಾಕಿಸ್ತಾನದಲ್ಲಿ ಜೆಇಎಂ ಸಂಸ್ಥಾಪಕ ಮಸೂದ್ ಅಜರ್ ಅವರ ಸಹೋದರಿ ಸಾದಿಯಾ ಅಜರ್ ನೇತೃತ್ವದ ಜೆಇಎಂನ ಮಹಿಳಾ ವಿಭಾಗವಾದ ಜಮಾತ್ ಉಲ್-ಮೊಮಿನಾತ್‌ನ ಕಮಾಂಡ್ ಅನ್ನು ಡಾ. ಶಾಹೀನ್ ಶಾಹಿದ್ ಅವರಿಗೆ ವಹಿಸಲಾಗಿತ್ತು. ಸಾದಿಯಾ ಅಜರ್ ಅವರ ಪತಿ ಯೂಸುಫ್ ಅಜರ್, ಕಂದಹಾರ್ ಅಪಹರಣದ ಮಾಸ್ಟರ್‌ಮೈಂಡ್ ಆಗಿದ್ದು, ಮೇ 7 ರಂದು ಆಪರೇಷನ್ ಸಿಂಧೂರ್ ಸಮಯದಲ್ಲಿ ಕೊಲ್ಲಲ್ಪಟ್ಟಿದ್ದ ಎಂದು ವರದಿಯಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?