ದೆಹಲಿ ಬಾಂಬರ್ ಡಾ.ಉಮರ್ ನಬಿಯ ಪುಲ್ವಾಮಾದಲ್ಲಿರುವ ಮನೆ ಧ್ವಂಸಗೊಳಿಸಿದ ಭದ್ರತಾ ಪಡೆ

ಶ್ರೀನಗರ: ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಕಾರು ಚಲಾಯಿಸಿದ್ದ ಉಗ್ರ ಡಾ.ಉಮರ್ ನಬಿಯ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನೆಲಸಮಗೊಳಿಸಿವೆ. ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಎಂದು ಅಧಿಕಾರಿಗಳು ಇಂದು (ಶುಕ್ರವಾರ) ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಸ್ಫೋಟಕಗಳಿಂದ ತುಂಬಿದ್ದ ಹುಂಡೈ ಐ20 ಕಾರನ್ನು ಉಮರ್ ಚಲಾಯಿಸುತ್ತಿದ್ದ. ಸ್ಫೋಟಗೊಂಡ ಸ್ಥಳದಿಂದ ಸಂಗ್ರಹಿಸಲಾದ ಡಿಎನ್ಎ ಮಾದರಿಗಳು ಆತನ ತಾಯಿಯ ಮಾದರಿಗಳೊಂದಿಗೆ ಹೊಂದಿಕೆಯಾಗಿವೆ. ಇದಾದ ನಂತರ ಆತನ ಗುರುತು ದೃಢಪಟ್ಟಿದೆ. ಶೈಕ್ಷಣಿಕವಾಗಿ ಸಾಧನೆ ಮಾಡಿದ ವೃತ್ತಿಪರ ಎಂದು ಕರೆಯಲ್ಪಡುತ್ತಿದ್ದ ಉಮರ್ ಕಳೆದ ಎರಡು ವರ್ಷಗಳಿಂದ ತೀವ್ರಗಾಮಿಯಾಗಿ ಮಾರ್ಪಟ್ಟಿದ್ದಾನೆ ಎಂಬುದು ಗೊತ್ತಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಉಗ್ರಗಾಮಿ ಸಂದೇಶ ಸಾರುವ ಗುಂಪುಗಳನ್ನು ಆತ ಸೇರಿದ್ದ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?