ಬ್ರೆಡ್‌ಲ್ಲಿ ಅಕ್ರಮ ಮಾದಕವಸ್ತು ಸಾಗಾಟ; ನೈಜೀರಿಯಾ ಮೂಲದ ಮಹಿಳೆ ಬಂಧನ..!

ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮುಂಬೈಯಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಕೊಕೇನ್ ಸಾಗಾಟ ಮಾಡುತ್ತಿದ್ದಳು. ಈ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 65 ಲಕ್ಷ ರೂ. ಮೌಲ್ಯದ 120 ಗ್ರಾಂ ಕೊಕೇನ್ ವಶಕ್ಕೆ ಪಡೆದಿದ್ದಾರೆ.ಯಾರಿಗೂ ಅನುಮಾನ ಬಾರದಂತೆ ಬ್ರೆಡ್‌ನ ಒಳಭಾಗದ ಪೀಸ್ ಕಟ್ ಮಾಡಿ, ಅದರೊಳಗೆ ಕೊಕೇಕ್ ಇಟ್ಟು ಡ್ರಗ್ ಸಾಗಾಟ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಸದ್ಯ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ

News Editor

Learn More →

Leave a Reply

Your email address will not be published. Required fields are marked *