
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಸ್ಲೀಪರ್ ಕೋಚ್ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಹೊತ್ತಿ ಉರಿದಿದೆ. ಈ ದುರ್ಘಟನೆಯಲ್ಲಿ ಒಟ್ಟು 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


