ಅಂತರರಾಜ್ಯ ಕಳ್ಳಿಯರನ್ನು ಹಿಡಿದು ಪುತ್ತೂರು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಮ್ಮಿಂಜೆ ಗ್ರಾಮದಲ್ಲಿ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಅಂತರರಾಜ್ಯ ಕಳ್ಳಿಯರು ಸಿಕ್ಕಿಬಿದ್ದ ಘಟನೆ ನಡೆದಿದೆ.

ಡಿಸೆಂಬರ್ 24ರಂದು ಹೆಜಮಾಡಿಯ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಡೆದ ನೇಮೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಚಿನ್ನಾಭರಣ ಕಳವು ಮಾಡಿದ್ದ ಕಳ್ಳಿಯರ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.

ಈ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಗಮನಿಸಿದ ಸಾರ್ವಜನಿಕರು, ಕಳ್ಳತನದಲ್ಲಿ ಭಾಗಿಯಾಗಿದ್ದ ಮಹಿಳೆಯರೇ ಎಂದು ಗುರುತಿಸಿಕೊಂಡು ಕೆಮ್ಮಿಂಜೆ ಕಿರುಷಷ್ಠಿ ಸಂದರ್ಭದಲ್ಲೇ ಅವರನ್ನು ಹಿಡಿದುಕೊಂಡಿದ್ದಾರೆ.

ಸಮಯಪ್ರಜ್ಞೆ ತೋರಿದ ಸ್ಥಳೀಯರು ಕಳ್ಳಿಯರನ್ನು ಪುತ್ತೂರು ನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಾರ್ವಜನಿಕರ ಜಾಗೃತಿಯಿಂದ ಕಳ್ಳತನ ಪ್ರಕರಣ ಭೇದನೆಯಾಗಿದ್ದು, ಸ್ಥಳೀಯರು ಪೊಲೀಸರ ಕಾರ್ಯಕ್ಕೆ ಸಹಕಾರ ನೀಡಿದ ಘಟನೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?