ಪುತ್ತೂರಿನ ದರ್ಬೆಯಲ್ಲಿ ಪಿಸ್ತೂಲ್ ತೋರಿಸಿ ಬೆದರಿಸಿದ್ದ ವ್ಯಕ್ತಿ ವಶಕ್ಕೆ.

ಪುತ್ತೂರಿನ ದರ್ಬೆಯಲ್ಲಿ ಪಿಸ್ತೂಲ್ ತೋರಿಸಿ ಬೆದರಿಸಿದ್ದ ವ್ಯಕ್ತಿ ವಶಕ್ಕೆ.

ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಬೈಕ್‌ನಲ್ಲಿ ಬಂದ ಸವಾರ ವ್ಯಕ್ತಿಯೊಬ್ಬರಿಗೆ
ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿರುವ ಕುರಿತು ಮಾಹಿತಿ ತಿಳಿದು ಬಂದಿದೆ.

ಮುಕೈ ನಿವಾಸಿ ಮಹಮ್ಮದ್ ಶಫೀಕ್(19ವ) ಎಂಬವರು ವಶದಲ್ಲಿರುವ ಆರೋಪಿ. ಮಾ.2ರಂದು ಕೂರ್ನಡ್ಕ ನಿವಾಸಿ ಅಬ್ದುಲ್ ಹಕೀಂ ಎಂಬವರಿಗೆ ದರ್ಬೆ ರಿಲಾಯನ್ಸ್ ಬಳಿ ದ್ವಿಚಕ್ರ ವಾಹನದಲ್ಲಿ ಹೆಲ್ಮಟ್ ಧರಿಸದೆ ಬಂದ ಅಪರಿಚಿತ ಸುಮಾರು 30 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಪ್ರಯತ್ನಿಸಿದ್ದರು ಎಂಬ ದೂರಿಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಕುರಿತು ತನಿಖೆ ಕೈಗೆತ್ತಿಕೊಂಡ ಪೊಲೀಸರು ಪೇಟೆಯಾದ್ಯಂತ ಸಿಸಿ ಕ್ಯಾಮರಗಳನ್ನು ಪರಿಶೀಲಿಸಿದಾಗ ದರ್ಬೆ ಸುಬ್ರಹ್ಮಣ್ಯ ರಸ್ತೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಆತ ದರ್ಬೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದು ಅಲ್ಲಿಂದ ಪಿಸ್ತೂಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?