
ಪುತ್ತೂರು: ಪುತ್ತೂರಿನಲ್ಲಿ ಎಣ್ಣೆಯ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬರು ಪುತ್ತೂರಿನ ಅರುಣ ಸಭಾಭವನದ ಸಮೀಪದ ಟ್ರಾನ್ಸ್ಫಾರ್ಮರ್ ಏರಿದ ಪರಿಣಾಮ ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ.
ವ್ಯಕ್ತಿಯು ಮದ್ಯದ ಅಮಲಿನಲ್ಲಿ ಟ್ರಾನ್ಸ್ಫಾರ್ಮರ್ ಮೇಲೆ ಏರಲು ಯತ್ನಿಸಿದ್ದು, ಈ ವೇಳೆ ವಿದ್ಯುತ್ ಶಾಕ್ ತಗುಲಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು 108 ಗೆ ಕರೆ ಮಾಡಿದ್ದಾರೆ. ಆ್ಯಂಬುಲೆನ್ಸ್ ಮೂಲಕ ತಕ್ಷಣ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


