ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಬಲೆಗೆ ಸಿಲುಕಿಕೊಂಡು ಮೃತ್ಯು

ಕಾಪು : ಉಡುಪಿ ಜಿಲ್ಲೆಯ ಕಾಪುವಿನ ಪೊಲಿಪು ಕಡಲಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಬಲೆಗೆ ಸಿಲುಕಿಕೊಂಡು ಸಾವನ್ನಪಿದ ಘಟನೆ ಇಂದು ಸಂಭವಿಸಿದೆ

ಪೊಲಿಪು‌ ನಿವಾಸಿ ಕಿಶೋರ್ (29) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಇವರು ದಿನನಿತ್ಯ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ.

ಇಂದು ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕಾ ಬಲೆಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಬೇರೆ ಮೀನುಗಾರಿಕಾ ಬೋಟಿನವರಿಗೆ ಮೃತದೇಹ ಪತ್ತೆಯಾಗಿದೆ. ನಂತರ ದಡಕ್ಕೆ ಮೃತದೇಹವನ್ನು ತಂದಿದ್ದಾರೆ.

ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪುರಸಭಾ ಸದಸ್ಯ ಕಿರಣ್ ಆಳ್ವ, ವಿಜಯ್ ಕರ್ಕೇರ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಸ್ಥಳೀಯರಾದ ಶಿವಾಜಿ ಸುವರ್ಣ, ಬಾಲಕೃಷ್ಣ ಹಾಗೂ ಕಾಪು ಪೊಲೀಸರು ಭೇಟಿ ನೀಡಿದ್ದಾರೆ

News Editor

Learn More →

Leave a Reply

Your email address will not be published. Required fields are marked *