ಧರ್ಮಸ್ಥಳ ದರೋಡೆ ಯತ್ನ ಪ್ರಕರಣ: 7 ಆರೋಪಿಗಳಿಗೆ ನ್ಯಾಯಾಲಯದಿಂದ ಖುಲಾಸೆ

ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲ – 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ತೀರ್ಪು

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಯತ್ನ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಏಳು ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಕೃಷಿ ಹಾಗೂ ಧರ್ಮಸ್ಥಳದ ರೆವಿನ್ಯೂ ವಿಭಾಗದ ವ್ಯವಸ್ಥಾಪಕ ಶುಭ ಚಂದ್ರರಾಜ್ ಅವರ ಮನೆಯಲ್ಲಿ ದರೋಡೆಗೆ ಯತ್ನ ನಡೆಸಿದ್ದು, ಮನೆಯ ನಾಯಿಯನ್ನು ಕೊಂದು ಮನೆಗೆ ಪ್ರವೇಶಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿತು. ಸುಮಾರು 15 ಮಂದಿ ಸಾಕ್ಷಿದಾರರನ್ನು ವಿಚಾರಣೆ ನಡೆಸಿದರೂ ಆರೋಪವನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪರಿಣಾಮವಾಗಿ ಪ್ರಕರಣದಲ್ಲಿದ್ದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿಗಳ ಪರವಾಗಿ ವಕೀಲರಾದ ಶ್ರೀ ವೇಣುಕುಮಾರ್ ಮತ್ತು ಯುವರಾಜ್ ಕೆ. ಅಮೀನ್ ವಾದ ಮಂಡಿಸಿದರು.

News Editor

Learn More →

Leave a Reply

Your email address will not be published. Required fields are marked *