ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ 4ರಿಂದ 6 ಮಂದಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಇದು ರ್ಯಾಗಿಂಗ್ ಪ್ರಕರಣದಂತೆಯೇ ಕಂಡುಬರುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ನಗರದ ಗುಜ್ಜರಕೆರೆ ಸಮೀಪದ ಚಹಾ ಅಂಗಡಿ ಬಳಿ ಈ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಹಲ್ಲೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.


