ಪುತ್ತೂರು: ಮೃತ ಸಾರೆಪುಣಿ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು- ಶಾಸಕ ಅಶೋಕ್ ರೈ

ಪುತ್ತೂರು: ಜುಲೈ 18 ರಂದು ತನ್ನ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 3 ಲಕ್ಷ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.


ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದ ಶಾಸಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಂತೆಯೂ ಮನವಿ ಮಾಡಿದರು.

ನಿಶಾನಾ ಳ ಕುಟುಂಬ ಆರ್ಥಿಕವಾಗಿ ತೀರಾ ಬಡವರಾಗಿದ್ದು ಮೃತಳಿಗೆ ಮೂರು ವರ್ಷ ಪ್ರಾಯದ ಮಗುವಿದ್ದು ,ಕುಟುಂಬ ನೊಂದುಕೊಂಡಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಶಾಸಕರ ಮನವಿಯ ಮೇರೆಗೆ ಸಿ ಎಂ ಅವರು ಮೂರು ಲಕ್ಷ ಪರಿಹಾರ ಮೊತ್ತವನ್ನು ಮಂಜೂರುಗೊಳಿಸಿದ್ದು ಕೆಲವೇ ದಿನಗಳಲ್ಲಿ ಈ ಮೊತ್ತ ನಿಶಾನ ಕುಟುಂಬದ ಖಾತೆಗೆ ಜಮೆಯಾಗಲಿದೆ.

Star Of Kudla

Learn More →

Leave a Reply

Your email address will not be published. Required fields are marked *