
ವೈದ್ಯಕೀಯ ತಜ್ಞರಾ ಶಿಫಾರಸ್ಸಿನ ಅನ್ವಯ ದೇಶದಲ್ಲಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಹನಿ ಹಾಕಲಾಗುತ್ತಿದೆ ರಾಜ್ಯದಲ್ಲಿ ಪೋಲಿಯೋ ಹನಿ ವಿತರಣೆ 33712 ಬೂತುಗಳನ್ನು ಗುರುತಿಸಲಾಗಿದೆ.
963 ಸಂಚಾರಿ ತಂಡಗಳು ರೈಲು ನಿಲ್ದಾಣ ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ ಈ ಕಾರ್ಯಕ್ರಮಕ್ಕೆ 1.11 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳು ಲಸಿಕೆ ಪಡೆದುಕೊಳ್ಳಬೇಕು ಈ ಲಸಿಕೆಯು ಸಂಪೂರ್ಣ ಸುರಕ್ಷಿತವಾಗಿದ್ದು ವದಂತಿಗಳಿಗೆ ಕಿವಿ ಕೊಡಬಾರದು. ಪೋಲಿಯೋ ವಿರುದ್ಧದ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು ರಾಜ್ಯದ ಎಲ್ಲಾ ಆಸ್ಪತ್ರೆಗಳು ರೈಲು ನಿಲ್ದಾಣ ಮೆಟ್ರೋ ನಿಲ್ದಾಣ ವಿಮಾನ ನಿಲ್ದಾಣ ಗ್ರಾಮೀಣ ಪ್ರದೇಶ ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧಡೆ ಲಸಕಿ ಹಾಕಲು ವ್ಯವಸ್ಥೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ
ಹೆಚ್ಚಿನ ಮಾಹಿತಿಗೆ ಹತ್ತಿರದ ಆರೋಗ್ಯ ಕೇಂದ್ರವನ್ನು ಭೇಟಿ ಮಾಡಬಹುದು ಅಲ್ಲದೆ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಬಹುದು


