ಮೀಟರ್ ಬಡ್ಡಿ ದಂಧೆಗೆ ಕಡಿವಾಣ..!! ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

ಸಾಮಾನ್ಯ ಜನರ ಆರ್ಥಿಕ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡು ಶೋಷಣೆ ಮಾಡುತ್ತಿರುವ ಅಕ್ರಮ ಮೀಟರ್ ಬಡ್ಡಿ ಹಾಗೂ ಲೇವಾದೇವಿ ದಂಧೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಬಡ್ಡಿ ದಂಧೆಯ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡುವವರ ವಿರುದ್ಧ ತಕ್ಷಣವೇ ಕಾನೂನುಬದ್ಧ ಹಾಗೂ ಅತ್ಯಂತ ಕಠಿಣ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.

ಬಡ ಹಾಗೂ ಮಧ್ಯಮ ವರ್ಗದ ಜನರು ತುರ್ತು ಅಗತ್ಯಗಳಿಗಾಗಿ ಸಾಲ ಪಡೆದು, ಬಳಿಕ ದುಬಾರಿ ಬಡ್ಡಿ ಮತ್ತು ಕಿರುಕುಳಕ್ಕೆ ಸಿಲುಕಿ ಜೀವನ ಹಾಳುಮಾಡಿಕೊಳ್ಳುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾಲದ ಹೆಸರಿನಲ್ಲಿ ನಡೆಯುವ ಇಂತಹ ಅಮಾನವೀಯ ಶೋಷಣೆಗೆ ಸಂಪೂರ್ಣವಾಗಿ ಅಂತ್ಯ ಹಾಡಿ, ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಗೌರವವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುವವರು ಮತ್ತು ಸಾರ್ವಜನಿಕರಿಗೆ ಬೆದರಿಕೆ ಒಡ್ಡುವವರ ವಿರುದ್ಧ ದೂರು ಬಂದ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *