ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಕೃತ್ಯಕ್ಕೆ ಹಣಕಾಸು ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ

ಕಾಪು: ಮುದರಂಗಡಿಯ ಸೈಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ‘ಪ್ರಿನ್ಸ್ ಎಂಟರ್‌ಪ್ರೈಸಸ್’ ಮಾಲಕ ಡೇವಿಡ್ ಡಿಸೋಜಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ಶಿರ್ವ ಠಾಣಾ ಪೊಲೀಸರು, ಕೃತ್ಯಕ್ಕೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳನ್ನು ಆಗಸ್ಟ್ 12ರಂದು ಬಂಧಿಸಿದ್ದಾರೆ.

ಮೋಟಾರ್ ಸೈಕಲ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳ ಪೈಕಿ ಹಿಂಬದಿ ಸವಾರನು ಡೇವಿಡ್ ಡಿಸೋಜಾ ಅವರ ತಲೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದನು. ಈ ಭೀಕರ ಕೊಲೆಗೆ ಸಂಬಂಧಿಸಿದಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಈಗಾಗಲೇ ದಸ್ತಗಿರಿ ಮಾಡಿದ್ದರು.

ಹಣಕಾಸು ನೆರವು ನೀಡಿದ್ದ ಆರೋಪಿಗಳ ಬಂಧನ:
ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಹೆಚ್ಚಿನ ವಿಚಾರಣೆ ಹಾಗೂ ತನಿಖೆ ನಡೆಸಿದ ವೇಳೆ, ಕೊಲೆ ಕೃತ್ಯಕ್ಕೆ ಹಣ ವರ್ಗಾವಣೆ ಮಾಡಲು ಸಹಾಯ ಮಾಡುವ ಮೂಲಕ ಪ್ರಮುಖ ಆರೋಪಿಗಳಿಗೆ ಸಹಕರಿಸಿದ ಇಬ್ಬರು ವ್ಯಕ್ತಿಗಳ ಪಾತ್ರ ಬೆಳಕಿಗೆ ಬಂದಿದೆ.

ಬಂಧಿತರನ್ನು ಚಿರಾಗ್ ಪೂಜಾರಿ (26) ಮೊಹಮ್ಮದ್ ಇರ್ಷಾದ್ (43 ವರ್ಷ) ಎಂದು ಗುರುತಿಸಲಾಗಿದೆ.

ಪ್ರಸ್ತುತ ಬಂಧಿತರಾಗಿರುವ ಇಬ್ಬರೂ ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ಪ್ರಕರಣದ ಹಿಂದಿರುವ ಸಂಪೂರ್ಣ ಜಾಲವನ್ನು ಭೇದಿಸಲು ಶಿರ್ವ ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು

Star Of Kudla

Learn More →

Leave a Reply

Your email address will not be published. Required fields are marked *