ಮಂಗಳೂರು: ನಗರದ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ ಶೆಟ್ಟಿ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವ್ಯಾಪಾರ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದ ಧರ್ಮೇಂದ್ರ ಶೆಟ್ಟಿ ಅವರು ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಯುವಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಅಪಾರ ಸಂಖ್ಯೆಯ ಯುವಕರ ಪ್ರೀತಿಗೆ ಪಾತ್ರರಾಗಿದ್ದರು.
ಧರ್ಮೇಂದ್ರ ಶೆಟ್ಟಿ ಅವರು ಈ ಹಿಂದೆ ದೂರದ ಬಹರೈನ್ನಲ್ಲಿ ಕೂಡ ವ್ಯವಹಾರ ನಡೆಸುತ್ತಿದ್ದರು. ಬಳಿಕ ಅನಾರೋಗ್ಯದ ಕಾರಣದಿಂದ ತಾಯ್ನಾಡಿಗೆ ಮರಳಿದ್ದರು ಎಂದು ತಿಳಿದುಬಂದಿದೆ.


