ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ 3.85 ಕೋಟಿ ವಂಚನೆ ಆರೋಪ: ಪ್ರಕರಣ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ವಂಚನೆ ಹಾಗೂ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕರ ವಿರುದ್ಧ ದೂರು ದಾಖಲಾಗಿದೆ.

ಓಂಪ್ರಕಾಶ್ ರಾವ್ ಬರೋಬ್ಬರಿ 3.85 ಕೋಟಿ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ʻಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು 3 ಕೋಟಿ 85 ಲಕ್ಷ ಹಣ ಪಡೆದು, ಹಣ ವಾಪಸ್ ನೀಡದೇ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ ಎಂಬುವರು ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಓಂ ಪ್ರಕಾಶ್ ರಾವ್ ವಿರುದ್ಧ ಕೇಸ್ ದಾಖಲಾಗಿದೆ.

ದೂರಿನ ಅನ್ವಯ, ʻಫೀನಿಕ್ಸ್’ ಸಿನಿಮಾ ನಿರ್ಮಾಣದ ಉದ್ದೇಶಕ್ಕಾಗಿ ಆರೋಪಿಗಳು ದೂರುದಾರರಿಂದ ಹಂತ-ಹಂತವಾಗಿ ಹಣ ಪಡೆದಿದ್ದಾರೆ. ಬಳಿಕ ಹಣವನ್ನ ವಾಪಸ್ ನೀಡದೇ ಮೋಸ ಮಾಡಿದ್ದಾರೆ. ಹಣ ವಾಪಸ್ ಕೇಳಲು ಮನೆಗೆ ತೆರಳಿದ್ದ ಸಂದರ್ಭದಲ್ಲಿ ದೂರುದಾರರಿಗೆ ಬೆದರಿಕೆ ಕೂಡ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *