ಉಡುಪಿ: ಬೆಳ್ಳಂಬೆಳಗ್ಗೆ ಚೂರಿ ಇರಿದು ಮೀನುಗಾರ ಕಾರ್ಮಿಕನ ಹತ್ಯೆ ಪ್ರಕರಣ- ಆರೋಪಿ ಅರೆಸ್ಟ್

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಆ.24ರಂದು ರಾತ್ರಿ ಬೋಟ್‌ನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆ.25ರಂದು ಬೆಳಗಿನ ಜಾವ ಗೋವಿಂದ, ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ದೊರೆತ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ ಹೆಡ್ ಕಾನ್‌ಸ್ಟೆಬಲ್ ಆದರ್ಶ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಕುಬೇರ ಅವರೊಂದಿಗೆ ಆರೋಪಿ ಪತ್ತೆಗೆ ಕಾರ್ಯಾಚರಣೆ ಕೈಗೊಂಡರು.

ಆರೋಪಿ ಗೋವಿಂದ ಉಡುಪಿಗೆ ತೆರಳಿ, ಅಲ್ಲಿಂದ ಹೈದರಾಬಾದ್ ಅಥವಾ ಮುಂಬೈ ಕಡೆಗೆ ರೈಲಿನಲ್ಲಿ ಪರಾರಿಯಾಗಲು ಮುಂದಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ರೈಲು ನಿಲ್ದಾಣದ ಬಳಿ ಆತನನ್ನು ತಕ್ಷಣ ವಶಕ್ಕೆ ಪಡೆದಿದ್ದಾರೆ.
ವಿಚಾರಣೆಯಲ್ಲಿ ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ಮನೆಗೆ ಹೋಗದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆಗಳಲ್ಲಿ ಕೆಲಸ ಮಾಡಿಕೊಂಡು ವಾಸಿಸುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2026, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *