ವಿಟ್ಲ: ಕೆರೆಯಲ್ಲಿ ಈಜಲು ತೆರಳಿದ್ದ ಬ್ಯಾಂಕ್ ಸಿಬ್ಬಂದಿ ಮೃತ್ಯು

ವಿಟ್ಲ: ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತರನ್ನು ವಿಟ್ಲ ಕಸಬಾ ಗ್ರಾಮದ ಗಾಳಿಹಿತ್ತಿಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಕನ್ಯಾನ ಎಸ್‌ಸಿಡಿಸಿಸಿ ಬ್ಯಾಂಕ್ ಶಾಖೆಯ ಸಿಬ್ಬಂದಿ ಲಿತಿನ್ (32) ಎಂದು ಗುರುತಿಸಲಾಗಿದೆ.ಬೆಳಗ್ಗಿನ ಜಾವ ಈಜಲು ತೆರಳಿದ್ದ ವೇಳೆ ಲಿತಿನ್ ನೀರಿನಲ್ಲಿ ಮುಳುಗಿದ್ದಾರೆ.

ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಹರಸಾಹಸಪಟ್ಟು ಅವರನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಲಿತಿನ್ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *