ಪುತ್ತೂರು: ಸ್ಟಿಕ್ಕರ್ ಅಳವಡಿಸಿದ ವಾಹನಗಳಿಗೆ ದಂಡ ವಿಧಿಸಿದ ಪೊಲೀಸರು

ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವಂತೆ ಗ್ಲಾಸ್‌ಗಳಿಗೆ ಸ್ಟಿಕ್ಕರ್ ಅಳವಡಿಸುವುದು, ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್ ಹಚ್ಚಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣಾ ಪೊಲೀಸರು ಕಠಿಣ ಕ್ರಮ ಕೈಗೊಂಡು ದಂಡ ವಿಧಿಸಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಸಾರ್ವಜನಿಕರು ಯಾವುದೇ ಉತ್ಸವ, ಹಬ್ಬ-ಹರಿದಿನಗಳು ಹಾಗೂ ಇನ್ನಿತರ ಕಾರ್ಯಕ್ರಮಗಳ ನೆಪದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *