ಬೆಳ್ತಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಬೆಳ್ತಂಗಡಿ: ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2014ರಲ್ಲಿ ದಾಖಲಾಗಿದ್ದ ಅ.ಕ್ರ. 172/2014 ಪ್ರಕರಣದಲ್ಲಿ ಡೆನ್ನಿ ಜೋಸೆಫ್ ಅಲಿಯಾಸ್ ಆಂಟೋನಿ ಆರೋಪಿಯಾಗಿದ್ದ. ಈತನ ವಿರುದ್ಧ ಐಪಿಸಿ ಕಲಂ 354(B), 323, 324, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಆಗಸ್ಟ್ 29ರಂದು ಕೇರಳದ ಕಣ್ಣೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಿಸಿ ಮುನಿಯ ನಾಯ್ಕ ಹಾಗೂ ಪಿಸಿ ಮನು ನಾಯ್ಕ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Star Of Kudla

Learn More →

Leave a Reply

Your email address will not be published. Required fields are marked *