ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಪುತ್ತೂರು ತಾಲೂಕಿನ ವಾತ್ಸಲ್ಯ ಪಲಾನುಭವಿಯವರ ಮಕ್ಕಳ ವಿದ್ಯಾರ್ಜನೆಗೆ ವಿದ್ಯಾನಿಧಿ ಕಿಟ್ ವಿತರಣೆ ಹಾಗೂ ಜ್ಞಾನದೀಪ ಶಿಕ್ಷಕರ ಮಂಜುರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ತಾಲೂಕಿನ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು.


ಸಭೆಯಲ್ಲಿ ಉಪಸ್ಥಿತರಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ದಕ್ಷಿಣ ಕನ್ನಡ 2 ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ಸರ್ ಇವರ ಮಾತನಾಡುತ್ತಾ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕಾರ್ಯಕ್ರಮ ಜ್ಞಾನವಿಕಾಸ. ಈ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಕಾರ್ಯಕ್ರಮದ ಮೂಲಕ ಸಮಾಜದ ನಿರ್ಗತಿಕರನ್ನು ಗುರುತಿಸಿ ಅವರ ಜೀವನ ನಿರ್ವಹಣೆಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಮಾಸಿಕ ಮಾಸಾಶನವನ್ನು ನೀಡುತ್ತ ಅವರ ಮಕ್ಕಳ ವಿದ್ಯಾರ್ಜನೆಗೆ ಸಹಕಾರಿಯಾಗುವಂತೆ ವಾತ್ಸಲ್ಯ ವಿದ್ಯಾನಿಧಿ ಕಿಟ್ ನೀಡುತ್ತಾ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕೆಂಬ ಆಶಯವನ್ನು ಹೊಂದಿದ್ದಾರೆ.
ಅದೇ ರೀತಿ ಖಾವಂದರು ಹಾಗೂ ಮಾತೃಶ್ರೀ ಅಮ್ಮನವರು ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಕೊಡುಗೆಯನ್ನು ನೀಡಿರುತ್ತಾರೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಉಜ್ಜಲಗೊಳಿಸಲು ವಿವಿಧ ಕಾರ್ಯಕ್ರಮಗಳನ್ನು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನಡೆಸುತ್ತಿದ್ದಾರೆ. ಮುಖ್ಯವಾಗಿ ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ನೀಡುವುದರೊಂದಿಗೆ ಅಲ್ಲಿಯ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸಕ್ಕೆ ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದಾರೆ. ಇಂತಹ ಸೌಲಭ್ಯಗಳನ್ನು ಯೋಜನೆಗಳನ್ನು ಪಡೆದುಕೊಂಡ ನಾವು ಎಂದಿಗೂ ಕ್ಷೇತ್ರಕ್ಕೆ ಚಿರಋಣಿಗಳಾಗಿರಬೇಕು ಎಂದು ಶುಭ ಹಾರೈಸಿದರು.

ಅದೇ ರೀತಿ ಸಭೆಯಲ್ಲಿ ಉಪಸ್ಥಿತರಿದ್ದ ಜನಜಾಗೃತಿ ವೇದಿಕೆಯ ತಾಲೂಕಿನ ಮಾಜಿ ಅಧ್ಯಕ್ಷರಾದ ಮಹಾಬಲ ರೈ ಒಳತಡ್ಕ ಇವರ ಮಾತನಾಡುತ್ತಾ ಗ್ರಾಮದಲ್ಲಿ ಯೋಜನೆಯ ಮೂಲಕ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಾ ಬರುತ್ತಿದೆ. ಇಂತಹ ಕಾರ್ಯಕ್ರಮಗಳು ಅದೆಷ್ಟು ಜನರ ಜೀವನವನ್ನು ಬದಲಾಯಿಸಿದೆ ಇನ್ನು ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಯೋಜನೆಯ ಮೂಲಕ ನಡೆಯುತ್ತ ಬರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆರಕ್ಷಕ ಠಾಣೆ ಪುತ್ತೂರು ಇಲ್ಲಿಯ ಸಹಾಯಕ ಉಪ ನಿರೀಕ್ಷಕರಾದ ನಾರಾಯಣ ಕೆ ಸರ್ ಇವರ ಮಾತನಾಡುತ್ತಾ ಇಂತಹ ಒಂದು ಮಹತ್ವಪೂರ್ಣ ಕಾರ್ಯಕ್ರಮಕ್ಕೆ ಭಾಗವಹಿಸಲು ನನಗೆ ಒಂದು ಅವಕಾಶ ಸಿಕ್ಕಂತಾಯಿತು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ತುಂಬಾ ಹೆಮ್ಮೆಯ ವಿಷಯ.ಜ್ಞಾನ ದೀಪ ಶಿಕ್ಷಕರು ಉತ್ತಮ ರೀತಿಯ ವಿದ್ಯಾರ್ಜನೆಯನ್ನು ಮಕ್ಕಳಿಗೆ ನೀಡುತ್ತಾ ಅವರ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ಕಟ್ಟಿಕೊಡಬೇಕೆಂದು ತಿಳಿಸಿದರು. ಅದೇ ರೀತಿ ಮಕ್ಕಳು ವಿದ್ಯಾಭ್ಯಾಸವನ್ನು ಕಲಿತು ತಮ್ಮ ಪೋಷಕರಿಗೆ ಹಾಗೂ ಸಮಾಜಕ್ಕೆ ಒಳ್ಳೆಯ ಹೆಸರನ್ನು ತರಬೇಕು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.
ತಾಲೂಕಿನಲ್ಲಿ 23 ವಿದ್ಯಾರ್ಥಿಗಳಿಗೆ ವಾತ್ಸಲ್ಯ ವಿದ್ಯಾನಿಧಿ ಕಿಟ್ ನ್ನು ವಿತರಿಸಲಾಯಿತು. (ಈ ಕಿಟ್ ನಲ್ಲಿ ನೋಟ್ ಬುಕ್ಸ್, , ಪೆನ್ಸಿಲ್, ಪೆನ್, ರಬ್ಬರ್, ಕಟ್ಟರ್, ಸ್ಕೇಲ್, ವಾಟರ್ ಬಾಟಲ್, ಛತ್ರಿ,ಕಂಪಾಸು, ಬ್ಯಾಗ್,ಪೌಚ್,ಡ್ರಾಯಿಂಗ್ ಬುಕ್,ಬೈಂಡ್ ಮುಂತಾದವುಗಳನ್ನು ನೀಡಲಾಯಿತು.
13 ಜನ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕಿನ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರಾದ ಸತೀಶ್ ನಾಯ್ಕ್, ತಾಲೂಕಿನ ಯೋಜನಾಧಿಕಾರಿಗಳಾದ ಶಶಿಧರ್ ಎಂ, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ,ಕಚೇರಿ ಸಹಾಯಕರು, ಜ್ಞಾನದೀಪ ಶಿಕ್ಷಕರು, ವಾತ್ಸಲ್ಯ ಪಲಾನುಭವಿಯವರು, ಹಾಗೂ ಮಕ್ಕಳು ಉಪಸ್ಥಿತರಿದ್ದರು.


