BJP JDS Seat Sharing: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ನಾಯಕರು ಸಲಹೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರಕ್ಕೆ ಬನ್ನಿ ಎಂದು ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ಸಲಹೆ ನೀಡಿದೆ.

ಬೆಂಗಳೂರು, ಡಿಸೆಂಬರ್ 22: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Election) ಕರ್ನಾಟಕದಲ್ಲಿ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಮಧ್ಯೆ ಸೀಟು ಹಂಚಿಕೆ ಬಹುತೇಕ ಪೂರ್ಣಗೊಂಡಿದೆ. ಮೂಲಗಳ ಪ್ರಕಾರ, 24 ಕ್ಷೇತ್ರಗಳಲ್ಲಿ ಬಿಜೆಪಿ ಕಣಕ್ಕಿಳಿಯಲಿದ್ದು, 4 ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಡಲು ಮಾತುಕತೆ ನಡೆದಿದೆ. ಬಿಜೆಪಿ ಹೈಕಮಾಂಡ್ ಜತೆ ಮಾತುಕತೆ ನಡೆಸಿದ ನಂತರ 4 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಜೆಡಿಎಸ್ ನಿರ್ಧಾರ ಕೈಗೊಂಡಿದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಬಹುತೇಕ ಫಿಕ್ಸ್ ಎನ್ನಲಾಗಿದೆ.


