ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಆರಿಫ್ ಕೊಲೆ ಪ್ರಕರಣದ ಆರೋಪಿಗಳ ಬಳಿ ಫೋನ್ ಪತ್ತೆ

ಮಂಗಳೂರು ಜಿಲ್ಲಾ ಕಾರಾಗೃಹದ ಎ-ಬ್ಲಾಕ್‌ಗೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಬಚ್ಚಿಟ್ಟಿದ್ದ 10 ಸ್ಮಾರ್ಟ್‌ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ತೊಕ್ಕೊಟ್ಟಿನಲ್ಲಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಆರೋಪಿಗಳಾದ ರಿಫಾತ್ ಅಲಿ, ಇಬ್ರಾಹಿಂ ಖಲೀಲ್, ಅಶ್ಫಾಕ್ ಅಲಿಯಾಸ್ ಜುಟ್ಟು ಅಸ್ಫಕ್ ಮತ್ತು ಅರ್ಷದ್ ಮೊಬೈಲ್ ಫೋನ್ ಬಳಸುತ್ತಿರುವುದು ಪತ್ತೆಯಾಗಿದೆ.

ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ದಾವೂದ್ ಫರ್ವೇಜ್, ನಝರತ್ ಅಲಿ, ಶಿಫಾನ್ ಮತ್ತು ಅಬ್ದುಲ್ ಸಾದೀಕ್ ಅವರ ಬಳಿಯೂ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ. ಇದೇ ವೇಳೆ ಕಂಕನಾಡಿ ನಗರ ಠಾಣೆಯ ಕೋಕಾ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ಅರ್ಫಾಜ್ ಬಳಿಯೂ ಮೊಬೈಲ್ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಮೊಬೈಲ್ ಫೋನ್‌ಗಳ ಬಳಕೆ ಹಾಗೂ ಅವುಗಳನ್ನು ಜೈಲಿಗೆ ಪೂರೈಸಿದ ವಿಚಾರದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದ ಇತರ ಮಾಹಿತಿಯನ್ನೂ ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಈ ಸಂಬಂಧ ಅ.ಕ್ರ. 82/2026ರಡಿ ಬಿಎನ್‌ಎಸ್ ಕಲಂ 323 ಹಾಗೂ ಕರ್ನಾಟಕ ಕಾರಾಗೃಹ ಕಾಯ್ದೆಯ ಕಲಂ 42ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಹೊಸ ಜೈಲರ್ ವರ್ಗಾವಣೆಯಾಗಿ ಬಂದ ಬಳಿಕ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿವೆ ಎಂಬ ಆರೋಪವೂ ಕೇಳಿಬಂದಿದೆ

Star Of Kudla

Learn More →

Leave a Reply

Your email address will not be published. Required fields are marked *