ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

ಬೆಳ್ತಂಗಡಿ : ಪುದುವೆಟ್ಟು ಗ್ರಾಮದಲ್ಲಿ ವಿಷಾದನೀಯ ಘಟನೆಯೊಂದು ನಡೆದಿದ್ದು, 20 ವರ್ಷದ ಯುವತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮೃತ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಹಾಗೂ ಮಾಲತಿ ದಂಪತಿಯ ಪುತ್ರಿ ಲಿಶ್ಮಿತ ಗೌಡ (20) ಎಂದು ಗುರುತಿಸಲಾಗಿದೆ. ಲಿಶ್ಮಿತ ಅವರು ನಡ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು.

ವಿಷಯ ತಿಳಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *