ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: 6 ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ

ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಲಾಗಿದ್ದು, ಈ ಪೈಕಿ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಅಳವಡಿಸಲಾಗಿದೆ.

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನ್ ರೈ (32), ತೇಜಾಕ್ಷ (24) ಮತ್ತು ರಂಜಿತ್ (35) ಎಂಬವರ ವಿರುದ್ಧ ಕಾನೂನು ಬದ್ಧವಾಗಿ ಗೂಂಡಾ ಕಾಯ್ದೆ ಅಳವಡಿಸಲಾಗಿರುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *