ಮಂಗಳೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ-ಇಬ್ಬರು ಗಂಭೀರ

ಮಂಗಳೂರು: ನಗರದ ಮರೋಳಿ ಸೂರ್ಯ ವುಡ್ಸ್ ತಿರುವಿನಲ್ಲಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವು ಕಾರಿನ ಮಧ್ಯಭಾಗವನ್ನು ಸೀಳಿಕೊಂಡು ಒಳಗೆ ನುಗ್ಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Star Of Kudla

Learn More →

Leave a Reply

Your email address will not be published. Required fields are marked *