ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ಸಾಗಾಟದ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಿ, ಗಾಂಜಾ, ಮೆಥಾಂಫೆಟಮೈನ್, ವಾಹನಗಳು, ಮೊಬೈಲ್ಗಳು ಹಾಗೂ ನಗದು ಸೇರಿದಂತೆ ಒಟ್ಟು ₹16,01,584 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಭದ್ರಮ್ಮ ರಸ್ತೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 1.354 ಕೆಜಿ ಗಾಂಜಾ, 32.74 ಗ್ರಾಂ ಮೆಥಾಂಫೆಟಮೈನ್, ಎರಡು ಕಾರು, ಒಂದು ಸ್ಕೂಟರ್, 9 ಮೊಬೈಲ್ಗಳು, ಎರಡು ತೂಕದ ಯಂತ್ರಗಳು ಹಾಗೂ ₹75,010 ನಗದು ಸೇರಿದಂತೆ ₹13.96 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಅಲ್ನಾಜ್ ಅಲಿಯಾಸ್ ಮೊಹಮ್ಮದ್ ಅನಾಸ್, ಮೊಹಮ್ಮದ್ ಅಲ್ತಾಪ್, ಸ್ಟ್ಯಾನಿ ಸಂದೀಪ್, ಶಾಕೀಬ್, ಮೊಹಮ್ಮದ್ ಫೈಜಲ್, ಇಮ್ತಿಯಾಜ್, ಅಜಯ್ ಕುಮಾರ್ ಹಾಗೂ ಸಂತೋಷ್ ದೇವಾಡಿಗ ಎಂಬ ಎಂಟು ಮಂದಿಯನ್ನು ಬಂಧಿಸಲಾಗಿದೆ.


