ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ವ್ಯಕ್ತಿಯ ಮೇಲೆ ಹಲ್ಲೆ- ಮೂವರ ಬಂಧನ

ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಆರೋಪದಡಿ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಸೆ.20ರಂದು ಸಂಜೆ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿ ಪ್ರಶಾಂತ್ ಬೆಳ್ಚಾಡ್‌ (41) ಎಂಬವರು ಇದ್ದಾಗ, ಅಟೋರಿಕ್ಷಾದಲ್ಲಿ ಬಂದ ಪರಿಚಯದ ಆರೋಪಿಗಳಾದ ಅಮ್ಮುಂಜೆಯ ಪ್ರಶಾಂತ್‌ (38), ತೆಂಕಬೆಳ್ಳೂರಿನ ರಾಮದಾಸ್‌ (43) ಹಾಗೂ ಬಡಗಬೆಳ್ಳೂರಿನ ಶಂಕರ (45) ಅವರು ತಲವಾರು ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ಪ್ರಶಾಂತ್‌ ಅವರಿಗೆ ತೀವ್ರ ರಕ್ತಗಾಯಗಳಾಗಿದ್ದು, ಪರಿಚಯದವರು ಸ್ಥಳಕ್ಕೆ ಬರುತ್ತಿರುವುದನ್ನು ಕಂಡ ಆರೋಪಿಗಳು ಪರಾರಿಯಾಗಿದ್ದರು. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಕುರಿತು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 124/2026ರಂತೆ BNS ಕಲಂ 109, 352, 351 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಆರೋಪಿಗಳಾದ ಪ್ರಶಾಂತ್‌, ರಾಮದಾಸ್‌ ಹಾಗೂ ಶಂಕರ ಅವರನ್ನು ಬಂಧಿಸಿ, ಸೆ.25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Star Of Kudla

Learn More →

Leave a Reply

Your email address will not be published. Required fields are marked *