ಬಂಟ್ವಾಳ: ಅಕ್ರಮ ಮರಳುಗಾರಿಕೆ ಮೇಲೆ ಪೊಲೀಸರ ದಾಳಿ!! ವಾಹನ, ಮರಳು ವಶ

ಬಂಟ್ವಾಳ: ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್‌ಗಳಿಗೆ ತುಂಬಿಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ, ಮೂವರು ಟಿಪ್ಪರ್‌ ಲಾರಿ, ಒಂದು ಜೆಸಿಬಿ ಹಾಗೂ ಮರಳು ಸೇರಿದಂತೆ ಸುಮಾರು ₹25.24 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಸೆ.25ರಂದು ಮುಂಜಾನೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಲಾರಿಗಳಿಗೆ ತುಂಬಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಈ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ರನ್ನಗೌಡ ಪಾಟೀಲ ನೇತೃತ್ವದ ತಂಡ ಸ್ಥಳಕ್ಕೆ ತೆರಳಿ ದಾಳಿ ನಡೆಸಿದೆ.ದಾಳಿ ವೇಳೆ KA-06-D-8454, KA-19-AF-9094 ಮತ್ತು KA-19-AB-1508 ನೋಂದಣಿ ಸಂಖ್ಯೆಯ ಮೂರು ಟಿಪ್ಪರ್ ಲಾರಿಗಳು ಹಾಗೂ KA-20-N-7175 ನೋಂದಣಿ ಸಂಖ್ಯೆಯ ಜೆಸಿಬಿ ಪತ್ತೆಯಾಗಿವೆ. ಸ್ಥಳದಲ್ಲಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಸುಮಾರು ಎರಡು ಲೋಡ್ ಮರಳು ಹಾಗೂ ಮರಳು ಲೋಡ್ ಮಾಡಲು ಬಳಸುತ್ತಿದ್ದ ಸಾಮಗ್ರಿಗಳನ್ನು ಕೂಡ ವಶಪಡಿಸಿಕೊಂಡಿದ್ದಾರೆ.ವಿಚಾರಣೆ ವೇಳೆ ಯಾವುದೇ ಅನುಮತಿ ಇಲ್ಲದೆ ನದಿ ಕಿನಾರೆಯಿಂದ ಮರಳು ಸಂಗ್ರಹಿಸಿ ಲಾರಿಗಳಿಗೆ ಲೋಡ್ ಮಾಡಿ ಸಾಗಿಸುತ್ತಿರುವುದಾಗಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ನಿಹಾನ್, ರಾಜೀಕ್, ಮೊಹಮ್ಮದ್ ಶಂಶೀರ್, ಮಹಮ್ಮದ್ ಅಶ್ರಫ್, ಸ್ಟೀವನ್ ಡಿಸೋಜಾ ಹಾಗೂ ಕೃತ್ಯಕ್ಕೆ ಸಹಕರಿಸಿದ ರೈಟರ್ ಶಿವಪ್ರಸಾದ್ ಆಳ್ವ ಮತ್ತು ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ.129/2026ರಂತೆ ಪ್ರಕರಣ ದಾಖಲಾಗಿದೆ.KMMC Rules-1994, MMRD Act ಹಾಗೂ BNS-2023ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *