ಬಂಟ್ವಾಳ: ಮಾಣಿ ಫ್ಲೈ ಓವರ್ ರಸ್ತೆಯಲ್ಲಿ ಭೀಕರ ಅಫಘಾತ – ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

ಬಂಟ್ವಾಳ: ಮಾಣಿ ಫೈಓವರ್‌ ರಸ್ತೆಯಲ್ಲಿ ಆಲ್ಟೋ ಕಾರು ಹಾಗೂ ಟೆಂಪೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಸುಮಾರು 6 ಗಂಟೆಗೆ ನಡೆದಿದೆ.

ಮಡಿಕೇರಿ ನಿವಾಸಿ ನಫೀಸಾ (55) ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ. ಆಲ್ಲೋ ಕಾರಿನಲ್ಲಿ ಚಾಲಕ ಸೇರಿದಂತೆ ಐವರು ಪ್ರಯಾಣಿಸುತ್ತಿದ್ದು, ನಾಲ್ವರು ಮಹಿಳೆಯರು ಹಾಗೂ ಚಾಲಕ ಇದ್ದರು. ಉಮ್ರಾ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಕುಟುಂಬದವರು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಣಿ ಬಳಿ ಪುತ್ತೂರು-ಮಡಿಕೇರಿ-ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಸರ್ವಿಸ್ ರಸ್ತೆಯ ವಿನ್ಯಾಸ ಹಾಗೂ ಪ್ರವೇಶ ಮಾರ್ಗದ ಬಗ್ಗೆ ಸ್ಥಳೀಯರು ಈ ಹಿಂದೆಯೂ ಅಸಮಾಧಾನ ವ್ಯಕ್ತಪಡಿಸಿದ್ದರು. ಹೊರಗಿನಿಂದ ಬರುವ ವಾಹನ ಚಾಲಕರಿಗೆ ಸರ್ವಿಸ್ ರಸ್ತೆ ಸರಿಯಾಗಿ ಗೋಚರಿಸದೆ ಗೊಂದಲ ಉಂಟಾಗುತ್ತಿದ್ದು, ಕಿರಿದಾದ ಪ್ರವೇಶ ರಸ್ತೆಯ ಜೊತೆಗೆ ಸೂಕ್ತ ಸೂಚನಾ ಫಲಕಗಳ ಕೊರತೆಯೂ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Star Of Kudla

Learn More →

Leave a Reply

Your email address will not be published. Required fields are marked *