16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ನೇಣಿಗೆ ಶರಣು!!

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಬರೋಬ್ಬರಿ 16 ಲಕ್ಷ ಫಾಲೋವರ್ಸ್ ಹೊಂದಿದ್ದ ಫೇಮಸ್ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ (30) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

ನಿಧಿ ಅವರಿಗೆ ಫೇಸ್‌ಬುಕ್‌ನಲ್ಲಿ ಸುಮಾರು 9 ಲಕ್ಷ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 7 ಲಕ್ಷ ಫಾಲೋವರ್ಸ್ ಇದ್ದರು. ಅವರ ರೀಲ್ಸ್ ಮತ್ತು ಪೋಸ್ಟ್‌ಗಳಿಗೆ ಸಾವಿರಾರು ಪ್ರತಿಕ್ರಿಯೆಗಳು ಬರುತ್ತಿದ್ದವು. ಹಲವು ವಿಡಿಯೋಗಳು ಲಕ್ಷಾಂತರ ವೀವ್ಸ್ ಪಡೆದುಕೊಂಡಿದ್ದವು.

ಸಿಂಗ್ರೌಲಿಯ ಭೂಸಾ ಮೋಡ್ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ ನಿಧಿ ಮೃತಪಟ್ಟಿದ್ದಾರೆ. ಶನಿವಾರ ಸಂಜೆ ಅವರು ಯಾರೊಂದಿಗೋ ಫೋನ್‌ನಲ್ಲಿ ಮಾತನಾಡುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಬಳಿಕ ಅವರ ಮನೆಯ ಕೋಣೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ನಿಧಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯರಾಗಿದ್ದರು. ರೀಲ್ಸ್ ಹಾಗೂ ಡಿಜಿಟಲ್ ಕಂಟೆಂಟ್ ಮೂಲಕ ದೊಡ್ಡ ಮಟ್ಟದ ಫಾಲೋವರ್ಸ್‌ಗಳನ್ನು ಹೊಂದಿದ್ದರು. ಸ್ಥಳೀಯ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು

Star Of Kudla

Learn More →

Leave a Reply

Your email address will not be published. Required fields are marked *