ಮಂಗಳೂರು: ನಗರದ ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಕೋರ್ಟ್ ರಸ್ತೆಯ ಇಳಿಜಾರಿನಲ್ಲಿ ಚಲಿಸುತ್ತಿದ್ದ ಗೂಡ್ಸ್ ಆಟೋ ಹಾಗೂ ಕರಂಗಲಪಾಡಿ ಕಡೆಯಿಂದ ಕೋರ್ಟ್ ರಸ್ತೆಗೆ ಪ್ರವೇಶೀಸುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಅಪಘಾತದ ರಭಸಕ್ಕೆ ಸ್ಥಳದಲ್ಲೇ ಚಲಿಸುತ್ತಿದ್ದ ದ್ವಿಚಕ್ರ ವಾಹನವೂ ಸಿಲುಕಿದೆ.
ಈ ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಹಾಗೂ ಗೂಡ್ಸ್ ಆಟೋ ಚಾಲಕ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಟೋ, ಕಾರು ಮತ್ತು ಬೈಕ್ ಮೂರೂ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿದೆ. ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


